ರಾಯಚೂರು : ರೋಡ್ ಕ್ರಾಸ್ ವೇಳೆ ಬೈಕಿಗೆ ಕಾರು ಡಿಕ್ಕಿ ಆಗಿದೆ. ಈ ವೇಳೆ ಬೈಕ್ ಮುಂದಿನ ಸವಾರ ಸಾವನ್ನಪ್ಪಿದ್ದು, ಹಿಂಬದಿಯ ಸವಾರರನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದ್ದು, 40 ವರ್ಷದ ವೀರೇಶ್ ಬೈಕ್ ಸವಾರ ಎಂದು ತಿಳಿದುಬಂದಿದೆ.
ರಾಯಚೂರಿನ ಮಸ್ಕಿ ತಾಲೂಕಿನ ಸಂತೆಕಲೂರಿನಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೆಟ್ರೋಲ್ ಹಾಕಿಸಿಕೊಂಡು ಮಸ್ಕಿ ಕಡೆಗೆ ಪ್ರಯಾಣಿಸುವಾಗ ಏಕಾಏಕಿ ವೇಗವಾಗಿ ಬಂದಂತಹ ಕಾರು ಡಿಕ್ಕಿ ಹೊಡೆದಿದೆ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು ಹಿಂಬದಿ ಸವಾರನಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.