ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಈ ಒಂದು ಚುನಾವಣೆಯಲ್ಲಿ ರಮೇಶ್ ಕತ್ತಿ ಬಣಕ್ಕೆ ಬಿಗ್ ಶಾಕ್ ಆಗಿದೆ. ಏಕೆಂದರೆ ಜಾರಕಿಹೊಳಿ ಬಣದ ಆರು ಜನರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು. 16 ನಿರ್ದೇಶಕ ಸ್ಥಾನಗಳ ಪೈಕಿ ಆರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚಿಕ್ಕೋಡಿಯಿಂದ ವಿಶ್ವಾಸ ವೈದ್ಯ, ಮೂಡಲಗೆಯಿಂದ ನೀಲಕಂಠ, ಸವದತ್ತಿ ಯಿಂದ ವಿರುಪಾಕ್ಷ ಮಾಮನೆ ಗೋಕಾಕ್ ನಿಂದ ಶಾಸಕ ರಮೇಶ ಜಾರಕಿಹೊಳಿ ಪುತ್ರ ಅಮರನಾಥ್ ಆಯ್ಕೆಯಾಗಿದ್ದು, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 13 ರಂದು ಚುನಾವಣಾಧಿಕಾರಿ ಅಧಿಕೃತವಾಗಿ ಚುನಾವಣಾ ಫಲಿತಾಂಶ ಘೋಷಣೆ ಮಾಡಲಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಕಚೇರಿ ಮುಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಗಿದೆ.