ಬೆಂಗಳೂರು : ಚನ್ನಪಟ್ಟಣ ಕನಕಪುರದಿಂದ ರೌಡಿಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ, ಸಚಿವರು ನನ್ನ ಮೇಲೆಯೇ ಕೈ ಎತ್ತಿ ಹಲ್ಲೆಗೆ ಯತ್ನಿಸಿದ್ದಾರೆ. ನನ್ನ ಮೇಲೆ ರೌಡಿಸಂ ಮಾಡುತ್ತಿದ್ದಾರೆ ಎಂದು ಶಾಸಕ ಆರ್ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಆಕ್ರೋಶ ಹೊರಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಡಿಗೆ ಕಾರ್ಯಕ್ರಮಕ್ಕೆ ಈ ಭಾಗದ ಸಂಸದರನ್ನು ಆಹ್ವಾನಿಸಿಲ್ಲ, ಶಾಸಕನಾಗಿರುವ ನನ್ನನ್ನೂ ಆಹ್ವಾನಿಸಿಲ್ಲ. ಸೋತ ಅಭ್ಯರ್ಥಿಯ ಜೊತೆ ನಡಿಗೆ ಕಾರ್ಯಕ್ರಮ ಮಾಡುತ್ತಿದ್ದಾರೆ. ಇದು ರಾಅಜಕೀಯಕ್ಕಾಗಿ ಮಾಡುತ್ತಿರುವ ಕಾರ್ಯಕ್ರಮ ಹೊರತು ಜನರಿಗಾಗಿ, ಜನರ ಸಮಸ್ಯೆ, ಕುಂದುಕೊರತೆ ಆಲಿಸಲು ಮಾಡುತ್ತಿರುವ ಕಾರ್ಯಕ್ರಮವಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಚಿವರು ನನ್ನ ಮೇಲೆಯೇ ಕೈ ಎತ್ತಿ ಹಲ್ಲೆಗೆ ಯತ್ನಿಸಿದ್ದಾರೆ. ನನ್ನ ಮೇಲೆ ರೌಡಿಸಂ ಮಾಡುತ್ತಿದ್ದಾರೆ. ಶಾಸಕನಾಗಿರುವ ನನ್ನನ್ನೇ ಅವಮಾನಿಸಿದ್ದಾರೆ. ನನ್ನನ್ನು ಹೊಡೆಯಲು ಕನಕಪುರ, ಚನ್ನಪಟ್ಟಣದಿಂದ ಜನರನ್ನು ಕರೆಸಿದ್ದಾರೆ, ಇದು ಸಾರ್ವಜನಿಕ ಕಾರ್ಯಕ್ರಮವಲ್ಲ ಕಾಂಗ್ರೆಸ್ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.