ಬೆಂಗಳೂರು : ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಚಲಿಸುತ್ತೀದ್ದ ಕ್ಯಾಂಟರ್ ಒಂದು ಉರಿದಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಪೂರ್ವ ತಾಲೂಕಿನ ಬೂದಿಗೆರೆ ರಸ್ತೆಯಲ್ಲಿ ಈ ಒಂದು ಅವಘಡ ಸಂಭವಿಸಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕ್ಯಾಂಟರ್ ಚಾಲಕ ವಾಹನದಿಂದ ತಕ್ಷಣ ಇಳಿದು ಪ್ರಣ ಉಳಿಸಿಕೊಂಡಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯಿಂದ ಕ್ಯಾಂಟರ್ ನ ಇಂಜಿನ್ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ಕುರಿತು ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವುದೇ ರೀತಿಯಾಗಿ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.