ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಗಣತಿ ಮುಂದುವರೆದಿದ್ದು, ಈವರೆಗೆ 131,65,809 ಮನೆಗಳ 4,87,21,722 ಜನರ ಮಾಹಿತಿ ದಾಖಲಾಗಿದೆ. ಒಟ್ಟಾರೆ ಶೇ.88.88 ರಷ್ಟು ಗಣತಿ ಪೂರ್ಣಗೊಂಡಿದೆ.
ಒಟ್ಟಾರೆ 1,47,88,831 ಮನೆಗಳ ಸಮೀಕ್ಷೆ ಗುರಿ ಹೊಂದಿದ್ದು, ಬಹುತೇಕ ಜಿಲ್ಲೆಗಳಲ್ಲಿ ಶೇ.95ಕ್ಕಿಂತ ಹೆಚ್ಚು ಸಮೀಕ್ಷೆ ಪೂರ್ಣಗೊಂಡಿದೆ. ಭಾನುವಾರ 1,85,232 ಮನೆಗಳ ಸಮೀಕ್ಷೆ ಮಾಡಲಾಗಿದೆ.
ಇದುವರೆಗೂ ಬೆಂಗಳೂರು ನಗರದಲ್ಲಿ 11.95 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಇಂದು ಒಂದು ದಿನ 1,35,2732 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಕಳೆದ 9 ದಿನಗಳಲ್ಲಿ ಒಟ್ಟು 11,95,717 ಮನೆಗಳ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ.
ಕೇಂದ್ರ ನಗರ ಪಾಲಿಗೆ ವ್ಯಾಪ್ತಿಯಲ್ಲಿ ರೂ. 1,53,839 ಮಣಿಗಳ ಸಮೀಕ್ಷೆ ಪೂರ್ಣಗೊಂಡಿದೆ. ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ 1,75,480 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಇನ್ನು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2,92,239 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಅದೇ ರೀತಿಯಾಗಿ ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2,11, 38 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಹಾಗೂ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ 3,62,851 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ..