ಕಲಬುರಗಿ : ತುರ್ತು ನೆರೆ ಪರಿಹಾರಕ್ಕೆ ಆಗ್ರಹಿಸಿ ಇಂದು ಕಲಬುರಗಿ ಬಂದ್ ಗೆ ಜಂಟಿ ಹೋರಾಟ ಸಮಿತಿ ಕರೆ ನೀಡಿದೆ.
ತುರ್ತು ನೆರೆ ಪರಿಹಾರಕ್ಕೆ ಆಗ್ರಹಿಸಿ ಇಂದು ಕಲಬುರಗಿ ಬಂದ್ ಗೆ ಜಂಟಿ ಹೋರಾಟ ಸಮಿತಿ ಕರೆ ನೀಡಿದ್ದು, ಕೇಂದ್ರೀಯ ಬಸ್ ನಿಲ್ದಾಣಕ್ಕೆ ಹೋರಾಟಗಾರರು ಮುತ್ತಿಗೆ ಹಾಕಿದ್ದಾರೆ. ಬಸ್ ಸಂಚಾರ ಬಂದ್ ಮಾಡುವಂತೆ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ.
ಇಂದಿನ ಕಲಬುರಗಿ ಬಂದ್ ಗೆ 20 ಕ್ಕೂ ಹೆಚ್ಚು ಅಧಿಕ ಸಂಘ ಸಂಸ್ಥೆಗಳಿಂದ ಬೆಂಬಲ ನೀಡಲಾಗಿದೆ. ಮಳೆ, ಪ್ರವಾಹದಿಂದ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ನೀಡಬೇಕು. ಜಿಲ್ಲೆಗೆ 5 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು, ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿದ್ದಾರೆ.