ಉತ್ತರಕನ್ನಡ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿತು. ಗ್ಯಾರಂಟಿ ಯೋಜನೆ ಮಾಡಿ ಈಗ ಎರಡುವರೆ ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ವಿಚಾರವಾಗಿ, ಕಾಂಗ್ರೆಸ್ ಶಾಸಕ ಆರ್. ವಿ ದೇಶಪಾಂಡೆ ಸ್ವಪಕ್ಷದ ವಿರುದ್ಧವೇ ಬೇಸರ ಹೊರಹಾಕಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ನವಗ್ರಾಮದಲ್ಲಿ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದಿದ್ರೆ ಪಂಚ ಗ್ಯಾರಂಟಿ ಯೋಜನೆಗಳನ್ನ ಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಸ್ವಪಕ್ಷದ ಯೋಜನೆ ಬಗ್ಗೆ ಶಾಸಕ ಆರ್.ವಿ ದೇಶಪಾಂಡೆ ಹೇಳಿದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆ ಆಗಿದೆ. ಜನರಿಗೆ ಅನುಕೂಲವಾಗಿರುವುದು ಒಂದೆಡೆಯಾದ್ರೆ, ಇನ್ನೊಂದೆಡೆ ಸರ್ಕಾರ ನಡೆಸಲು ಕಷ್ಟವಾಗಿದೆ.ಮಹಿಳೆಯರು ಎಲ್ಲ ಸೌಲಭ್ಯಗಳನ್ನ ಪಡೆಯುತ್ತಿದ್ದಾರೆ. ಪುರುಷರಿಗೆ ಯಾವುದೇ ಯೋಜನೆಗಳು ಇಲ್ಲ. ಸರ್ಕಾರದ ಈ ಯೋಜನೆಗಳನ್ನ ಜನರಿಗೆ ತಲುಪಿಸಲು ಅನೇಕ ಸಮಿತಿಗಳನ್ನ ರಚಿಸಲಾಗಿದೆ. ಅವುಗಳನ್ನು ನಿಭಾಯಿಸುವುದೇ ಆಗಿದೆ. ಹೀಗಾಗಿ ರಾಜ್ಯದಲ್ಲಿ ಅಭಿವೃದ್ಧಿಯ ವೇಗ ತಗ್ಗಿದೆ ಎಂದು ಹೇಳಿದ್ದಾರೆ.