ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಘಟನೆ ನಡೆದಿದ್ದು, ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಗೆ ಹೋಗುವ ಮಾರ್ಗದಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು, ಚಿಕ್ಕಬಳ್ಳಾಪುರ ಮೂಲದ ಸಿಕಂದರ್ ಬಾಬಾ ಹಾಗೂ ಜನಾರ್ಧನಾಚಾರಿ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಿಕಂದರ್ ಡ್ರಾಪ್ ಕೊಡುವ ನೆಪದಲ್ಲಿ ಯುವತಿಯನ್ನು ಬೈಕ್ ಹತ್ತಿಸಿಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅಲ್ಲಿಗೆ ಬಂದ ಸಿಕಂದರ್ ಸ್ನೇಹಿತ ಜನಾರ್ಧನಚಾರಿ ಕೂಡ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯ ಚಿನ್ನದ ಓಲೆ ಕಸಿದುಕೊಂಡು ಕಾಮುಕರು ಪರಾರಿಯಾಗಿದ್ದಾರೆ.
ಯುವತಿಯನ್ನು ಸ್ಥಳೀಯರು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧಾರದ ಮೇರೆಗೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.