ಮಂಗಳೂರು : ಖ್ಯಾತ ಪೋಷಕ, ಹಾಸ್ಯ ನಟ ರಾಜು ತಾಳಿಕೋಟೆ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಹಠಾಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ರಾಜು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತ್ರ ತಾಳಿಕೋಟಿ ನಗರದಲ್ಲಿ ವಾಸವಾಗಿದ್ದರು. ರಾಜು ತಾಳಿಕೋಟಿಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.
ಅಂದ್ಹಾಗೆ, ರಾಜು ತಾಳಿಕೋಟಿಯವರ ಮೂಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟಿ. ತಾಳಿಕೋಟಿಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲಿಕರೂ ಆಗಿದ್ದು, ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ನಾಟಕಗಳ ಮೂಲಕ ಜನರನ್ನ ರಂಜಿಸುತ್ತಿದ್ದರು.
ಪರಿಸರ ಮಾಲಿನ್ಯವು ಕೀಲುಗಳ ಉರಿಯೂತ, ಸಂಧಿವಾತಕ್ಕೆ ಕಾರಣವಾಗಬಹುದು ; ಅಧ್ಯಯನ
ಪರಿಸರ ಮಾಲಿನ್ಯವು ಕೀಲುಗಳ ಉರಿಯೂತ, ಸಂಧಿವಾತಕ್ಕೆ ಕಾರಣವಾಗಬಹುದು ; ಅಧ್ಯಯನ