ರಾಂಚಿ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, 14 ವರ್ಷದ ಬಾಲಕಿಯ ಮೇಲೆ 9 ಜನರಿಂದ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಸಂತ್ರಸ್ತೆಯ ಕುಟುಂಬದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಲವು ಸ್ಥಳಗಳ ಮೇಲೆ ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಘಟನೆ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದಿದೆ. ಭಾನುವಾರ ರಾತ್ರಿ, ರಾಂಚಿಯ ರಥು ಪ್ರದೇಶದಲ್ಲಿ 14 ವರ್ಷದ ಬಾಲಕಿಯ ಮೇಲೆ 9 ಜನರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಈ ಮಧ್ಯೆ, ದೂರು ಸ್ವೀಕರಿಸಿದ ತಕ್ಷಣ ಪೊಲೀಸರು ಪ್ರತಿಕ್ರಿಯಿಸಿದ್ದಾರೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು. ಸೋಮವಾರ ಪೊಲೀಸರು ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಮತ್ತೊಂದೆಡೆ, ಉಳಿದ ನಾಲ್ವರು ಆರೋಪಿಗಳನ್ನು ಬಂಧಿಸಲು ಹುಡುಕುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೋಕ್ಸೋ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.