ಬೆಂಗಳೂರು : ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಶಾಲಾ ಕಟ್ಟಡದಿಂದ ಜಿಗಿದು 17 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಿಚರ್ಡ್ಸ್ ಟೌನ್ ನಲ್ಲಿ ಈ ಒಂದು ಘಟನೆ ನಡೆದಿದೆ.ಮೃತ ಬಾಲಕ 12ನೇ ತರಗತಿಯ ವಿಜ್ಞಾನ ವಿದ್ಯಾರ್ಥಿ ಎಂದು ಹೇಳಲಾಗಿದೆ.
ನಿನ್ನೆ ಬೆಳಿಗ್ಗೆ 8.20ರ ಸುಮಾರಿಗೆ ಶಾಲಾ ಕಟ್ಟಡದಿಂದ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. ವಿದ್ಯಾರ್ಥಿಯ ಸಾವನ್ನು ಅಸಹಜ ಸಾವು ಎಂದು ವರದಿ (ಯುಡಿಆರ್) ಮಾಡಲಾಗಿದೆ. ಈಗಾಗಲೇ ಪೊಲೀಸರು ಶಾಲೆಯ ಸಿಸಿಟಿವಿಯನ್ನು ಪರಿಶೀಲನೆ ಮಾಡಿದ್ದು, ವಿದ್ಯಾರ್ಥಿ ಸಾವಿಗೆ ಕಾರಣ ಏನು ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ.