ಬೀದರ್ : ನವೆಂಬರ್ ನಲ್ಲಿ ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಎನ್ನುವ ಮಾಹಿತಿ ಲಭ್ಯವಾಗಿದೆ ಎಂದು ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ʻನವಂಬರ್ ಕಾಂತ್ರಿʼ ಬಗ್ಗೆ ಕುತೂಹಲವಿದೆ. ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಹೇಳಿದ್ದಾರೆ.
145 ಕೋಟಿ ಭಾರತೀಯರೂ ದೇಶ ಪ್ರೇಮಿಗಳೇ ಆರ್ ಎಸ್ ಎಸ್ ಗೆ ವಿಶೇಷವಾಗಿ ದೇಶ ಪ್ರೇಮ ಇಲ್ಲ. ಈ ಹಿಂದೇ 3 ಸಾವಿರ ಕೋಟಿ ಖರ್ಚು ಮಾಡಿ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆ ನಿರ್ಮಾಣ ಮಾಡಿದ್ದು ಅವರು ಕಾಂಗ್ರೆಸ್ನಲ್ಲಿ ಇದ್ದಾಗ ಪ್ರತಿಮೆ ಮಾಡಲು ವಿರೋಧ ಮಾಡಿದ್ದರು ಎಂದು ಕಿಡಿಕಾರಿದ್ದಾರೆ.