ಯಾದಗಿರಿ : ರೌಡಿಶೀಟರ್ ಜೊತೆ ಪಿಎಸ್ಐ ಕೇಕ್ ಕಟ್ ಮಾಡಿದ ವಿಚಾರವಾಗಿ ನಾರಾಯಣಪುರ ಠಾಣೆ ಪಿಎಸ್ಐ ರಾಜಶೇಖರ ಸಸ್ಪೆಂಡ್ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಠಾಣೆ ಪಿಎಸ್ಐ ರಾಜಶೇಖರ್ ನನ್ನ ಅಮಾನತುಗೊಳಿಸಲಾಗಿದೆ.
ಅಮಾನತು ಮಾಡಿ ಯಾದಗಿರಿ ಎಸ್ ಪಿ ಪೃಥ್ವಿಕ್ ಶಂಕರ್ ಆದೇಶ ಹೊರಡಿಸಿದ್ದಾರೆ.ಸಭೆ ಇನ್ಸ್ಪೆಕ್ಟರ್ ಆಗಿ 10 ವರ್ಷ ಪೂರ್ಣಗೊಳಿಸಿದ್ದಕ್ಕೆ ಕೇಕ್ ಕಟ್ ಮಾಡಿದ್ದಾರೆ. ನಾರಾಯಣಪುರ ಠಾಣಾ ವ್ಯಾಪ್ತಿಯ ರೌಡಿಶೀಟರ್ ನಾಗರಾಜ್ ಜೊತೆಗೆ ಪಿಎಸ್ಐ ರಾಜಶೇಖರ್ ಕೇಕ್ ಕಟ್ ಮಾಡಿರುವ ಹಿನ್ನೆಲೆಯಲ್ಲಿ ಇದೀಗ ಎಸ್ ಪಿ ಪೃಥ್ವಿ ಶಂಕರ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.