ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ನಿಡ್ಡೋಡಿಯಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ನಾಲ್ವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ.
ದಾಳಿಯ ವೇಳೆ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ. ಮೂಡುಬಿದಿರೆ ನಿಡ್ಡೋಡಿ ನಿವಾಸಿ ಆಟೋ ಚಾಲಕ ಮಹೇಶ್, ಕಟೀಲು ನಿವಾಸಿ ಶ್ರೀಕಾಂತ್, ಯಜ್ನೇಶ್ ಹಾಗು ದಿಲೀಪ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಮಹೇಶ್ ಇಬ್ಬರು ಅಪ್ರಾಪ್ತೆ ಬಾಲಕಿಯರನ್ನ ಪುಸಲಾಯಿಸಿ ಕರೆತಂದಿದ್ದ. ಈ ವೇಳೆ ಪೊಲೀಸರು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದಾರೆ.