ಬೆಂಗಳೂರು: ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿಸಿಯಿಂದ ಬೆಂಗಳೂರಿನಿಂದ ಶಿರಹಟ್ಟಿಗೆ ನಾನ್ ಎಸಿ ಸ್ಲೀಪರ್ ಪಲ್ಲಕ್ಕಿ ಬಸ್ ಸಂಚಾರವನ್ನು ಆರಂಭಿಸಲಾಗಿದೆ.
ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 17-10-2025ರಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಗದಗ ವಯಾ ತುಮಕೂರು, ಚಿತ್ರದುರ್ಗ, ದಾವಣಗೆರೆ, ಹರಿಹರ, ರಾಣೆಬೆನ್ನೂರು, ಗುತ್ತಲ ಹಾಗೂ ಶಿರಹಟ್ಟಿಗೆ ಹೊಸದಾಗಿ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭಗೊಳಿಸಲಾಗುತ್ತಿದೆ ಎಂದಿದೆ.
ಹೀಗಿದೆ ವೇಳಾಪಟ್ಟಿ ಮತ್ತು ಟಿಕೆಟ್ ದರ
ಬೆಂಗಳೂರು ಟು ಗದಗಕ್ಕೆ ರೂ.890 ಟಿಕೆಟ್ ದರ ನಿಗದಿ ಪಡಿಸಲಾಗಿದೆ. ಬೆಂಗಳೂರಿನಿಂದ ರಾತ್ರಿ 11 ಗಂಟೆಗೆ ಹೊರಡಲಿದ್ದು, ಮರು ದಿನ ಬೆಳಗ್ಗೆ ಗದಗಕ್ಕೆ 6 ಗಂಟೆಗೆ ತಲುಪಲಿದೆ. ಗದಗದಿಂದ ರಾತ್ರಿ 11 ಗಂಟೆಗೆ ಹೊರಟು ಬೆಂಗಳೂರಲ್ಲಿ ಬೆಳಗ್ಗೆ 6 ಗಂಟೆಗೆ ಬಸ್ ತಲುಪಲಿದೆ.
ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು
ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್
Good News ; ‘RBI’ನಿಂದ ‘e₹’ ಅನಾವರಣ ; ಈಗ ಇಂಟರ್ನೆಟ್ ಅಗತ್ಯವಿಲ್ಲ, ಒಂದೇ ಕ್ಲಿಕ್’ನಲ್ಲಿ ‘ಪಾವತಿ’