ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024 ರ ಕಲಂ 241(7) ಅವಕಾಶದಡಿ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತತ್ವದ ಆದೇಶ ಹೊರಡಿಸಿದೆ.
ಮೇಲೆ ಓದಲಾದ ದಿನಾಂಕ: 09-09-2025ರ ಆದೇಶವನ್ನು, ಈ ಕೆಳಕಂಡಂತೆ ಮಾರ್ಪಡಿಸಿ ಆದೇಶಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7)ರ ಅನ್ವಯ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ, 1200 ಚದರ ಅಡಿಗಳ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ, ನೆಲ+2 ಅಂತಸ್ತು ಅಥವಾ ಸ್ಟಿಲ್ಸ್ + 3 ಅಂತಸ್ತುಗಳವರೆಗಿನ ವಸತಿ ಕಟ್ಟಡಗಳಿಗೆ, ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶಿಸಿದೆ.
ಈ ಆದೇಶವನ್ನು ದಿನಾಂಕ: 09-10-2025 ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಕರಣ ಸಂಖ್ಯೆ: ಸಿ.857/2025ರ ನಿರ್ಣಯದಂತೆ ಹೊರಡಿಸಲಾಗಿದೆ.