ಬೆಂಗಳೂರು : ಬೆಂಗಳೂರಿನ ಬಡವರು ಮತ್ತು ಮಧ್ಯಮ ವರ್ಗದವರು ಅನಧಿಕೃತವಾಗಿ ನಿರ್ಮಿಸಿರುವ ಸಣ್ಣ ವಿಸ್ತೀರ್ಣದ ಮನೆಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೌದು ಬೆಂಗಳೂರಿನ ನಿವಾಸಿಗಳಿಗೆ ನಗರಾಭಿವೃದ್ಧಿ ಇಲಾಖೆ ಗುಡ್ ನ್ಯೂಸ್ ನೀಡಿದೆ. ಗ್ರೇಟರ್ ಬೆಂಗಳೂರು ಆಡಳಿತ (GBA) ವ್ಯಾಪ್ತಿಯಲ್ಲಿ 1200 ಚದರಡಿ(30*40 ಸೈಟ್) ವ್ಯಾಪ್ತಿಯ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಅಕ್ಟೋಬರ್ 9ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿತ್ತು. ಈ ನಿರ್ಧಾರದ ಅನ್ವಯ ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ 1200 ಚದರ ಅಡಿ ಜಾಗದಲ್ಲಿ ನಿರ್ಮಾಣಗೊಂಡಿರುವ ನೆಲ+2 ಅಂತಸ್ತು ಅಥವಾ ಸ್ಟಿಲ್ಟ್(ಬೇಸ್‌ಮೆಂಟ್ ಪಾರ್ಕಿಂಗ್)+3 ಅಂತಸ್ತುಗಳವರೆಗಿನ ವಸತಿ ಕಟ್ಟಡಗಳಿಗೆ ಓಸಿ ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶಿಸಿದೆ.
30*40 ಸೈಟ್ ನಲ್ಲಿ ನೆಲ +2 ಅಂತಸ್ತಿನ ಕಟ್ಟಡಗಳಿಗೆ, ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ಇದರಿಂದ ಬೆಂಗಳೂರಿನ ಲಕ್ಷಾಂತರ ಜನರು ನಿಟ್ಟುಸಿರುಬಿಟ್ಟಿದ್ದಾರೆ. ಹಿಂದೆ ಓಸಿ ಇಲ್ಲದ ಕಟ್ಟಡಗಳಿಗೆ ಜಲಮಂಡಳಿ, ಬೆಸ್ಕಾಂ ವಿದ್ಯುತ್ ಸಂಪರ್ಕ ನೀಡುತ್ತಿರಲಿಲ್ಲ. ಆದರೆ ಈ ಹೊಸ ಆದೇಶದಿಂದ ಬೆಂಗಳೂರಿನಲ್ಲಿ ನಿರ್ಮಾಣ ಆಗಿರುವ ಹಾಗೂ ನಿರ್ಮಾಣ ಹಂತದಲ್ಲಿರುವ ಲಕ್ಷಾಂತರ ಕಟ್ಟಡ ಮಾಲೀಕರಿಗೆ ಅನುಕೂಲವಾಗಲಿದೆ.