ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನವೆಂಬರ್‌ಗೆ ಎರಡೂವರೆ ವರ್ಷ ಪೂರೈಸಲಿದೆ. ನವೆಂಬರ್ ವೇಳೆಗೆ ರಾಜ್ಯ ರಾಜಕೀಯದಲ್ಲಿ ಮಹಾಕ್ರಾಂತಿಯಾಗಲಿದೆ ಎನ್ನುವ ಚರ್ಚೆ ಕೇಳಿ ಬರುತ್ತಿದ್ದು, ಈ ನಡುವೆ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್‌ರಚನೆ ಕುರಿತು ಹಲವು ಚರ್ಚೆಗಳು ನಡೆದಿವೆ.
ಇದೀಗ ಸಂಪುಟ ಪುನಾರಚನೆ ಆದ್ರೆ 15 ಹಾಲಿ ಸಚಿವರಿಗೆ ಗೇಟ್ ಪಾಸ್ ನೀಡೋದಂತು ಪಕ್ಕಾ, ಹಾಗಾಗಿ 15 ಶಾಸಕರಿಗೆ ಸಚಿವ ಸ್ಥಾನ ಸಿಗಲಿದೆ. ಇನ್ನೂ 15 ಜನ ಹಿರಿಯ ಶಾಸಕರು ಹಾಗೂ ಹೊಸ ಮುಖಗಳಿಗೆ ಮಣೆ ಹಾಕಲು ಹೈಕಮಾಂಡ್ ಮುಂದಾಗಿದೆ. ಏಕೆಂದರೆ ಮುಂದಿನ 2028 ರ ವಿಧಾನಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಅಸಮಾಧಾನಿತ ನಾಯಕರಿಗೆ ಮಂತ್ರಿ ಪಟ್ಟ ಕಟ್ಟಲು ತಯಾರಿ ನಡೆಸಿದೆ.
ನವೆಂಬರ್ ಎರಡನೇ ವಾರದಲ್ಲಿ, ರಾಜ್ಯದ ನಾಯಕರು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಅಂತಿಮ ಸುತ್ತಿನ ಮಾತುಕತೆ ನಡೆಸಲಿದ್ದಾರೆ. ಹೈಕಮಾಂಡ್‌ನಿಂದ ಹಸಿರು ನಿಶಾನೆ ಸಿಗುತ್ತಿದ್ದಂತೆಯೇ ಸಂಪುಟ ಪುನಾರಚನೆಯ ಕಸರತ್ತು ಅಧಿಕೃತವಾಗಿ ಆರಂಭವಾಗಲಿದೆ. ನವೆಂಬರ್ ತಿಂಗಳಾಂತ್ಯದ ವೇಳೆಗೆ ಸುಮಾರು 15ಕ್ಕೂ ಹೆಚ್ಚು ಹಾಲಿ ಸಚಿವರು ತಮ್ಮ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ.
ಯಾರಿಗೆಲ್ಲ ಸಚಿವ ಸ್ಥಾನ ಸಿಗಲಿದೆ?
ಬಿ.ಕೆ.ಹರಿಪ್ರಸಾದ್, ಆರ್.ವಿ.ದೇಶಪಾಂಡೆ, ಸಲೀಂ ಅಹಮದ್, ಬಿ.ನಾಗೇಂದ್ರ, ಬಸವರಾಜ ರಾಯರೆಡ್ಡಿ, ಅಪ್ಪಾಜಿ ನಾಡಗೌಡ, ಲಕ್ಷ್ಮಣ ಸವದಿ, ರೂಪ ಶಶಿಧರ್, ತರೀಕೆರೆ ಶ್ರೀನಿವಾಸ್, ಲೇಔಟ್ ಕೃಷ್ಣಪ್ಪ, ಟಿ.ಬಿ. ಜಯಚಂದ್ರ, ರಿಜ್ವಾನ್ ಅರ್ಷದ್ /ಯು.ಟಿ.ಖಾದರ್, ಕೆ.ಎನ್. ರಾಜಣ್ಣ ಅಥವಾ ರಘುಮೂರ್ತಿ, ಶಿವಲಿಂಗೇಗೌಡ ಅಥವಾ ಎಚ್.ಸಿ. ಬಾಲಕೃಷ್ಣ, ಪಿ.ಎಂ.ನರೇಂದ್ರ ಸ್ವಾಮಿ ಅಥವಾ ಶಿವಣ್ಣ ಮುಂತಾದವರ ಹೆಸರು ಮುನ್ನೆಲೆಗೆ ಬಂದಿದೆ. ಹಾಗಾಗಿ ಇವರನ್ನು ಹೊರತುಪಡಿಸಿ ಮತ್ತೆ ಯಾರಿಗಾದರೂ ಸಚಿವ ಸ್ಥಾನ ಸಿಗಲಿದೆಯೇ ಎಂಬುದನ್ನು ಕಾದು ನೋಡಬೇಕು.