ಮೈಸೂರು : ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2:40ಕ್ಕೆ ಹಾಸನದಿಂದ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಲಿದ್ದು, ಹೆಲಿಕ್ಯಾಪ್ಟರ್ ನಲ್ಲಿ ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರಿನಲ್ಲಿ ಬೌದ್ಧ ಮಹಾ ಸಮ್ಮೇಳನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಭಿಕ್ಕು ಸಂಘ ಹಾಗೂ ರಾಜ್ಯ ಬೌದ್ಧ ಸಂಘ ಸಂಸ್ಥೆ ಈ ಒಂದು ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮದ ಬಳಿಕ ಮತ್ತೆ ಸಂಜೆ 7 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.