ಕಲಬುರ್ಗಿ : ಕಲ್ಬುರ್ಗಿಯಲ್ಲಿ ತಿಪ್ಪೇಗುಂಡಿಯಲ್ಲಿ ನಾಡಪಿಸ್ತುಲ್ ಹಾಗೂ ಮೂರು ಗುಂಡುಗಳು ಪತ್ತೆಯಾಗಿವೆ, ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಿಂಚೋಳಿ (ಹೆಚ್) ಗ್ರಾಮದಲ್ಲಿ ನಾಡಪಿಸ್ತುಲ್ ಮತ್ತು ಗುಂಡುಗಳು ಪತ್ತೆಯಾಗಿವೆ.
ಟೈಲರ್ ಅಂಗಡಿಯಲ್ಲಿದ್ದ ಬಟ್ಟೆಗಳನ್ನು ಮಾಳಪ್ಪ ಎನ್ನುವ ವ್ಯಕ್ತಿ ಗುಂಡಿಗೆ ಹಾಕಿದ್ದ. ಈ ವೇಳೆ ಬಟ್ಟೆಗೆ ಬೆಂಕಿ ಹಚ್ಚಿದ ಕೆಲ ಸಮಯದ ಬಳಿಕ ಭಾರಿ ಸ್ಫೋಟದ ಶಬ್ದ ಕೇಳಿಸಿದೆ. ಆಗ ತಿಪ್ಪೆಗುಂಡಿ ಪರಿಶೀಲಿಸಿದಾಗ ಮೂರು ಗುಂಡು ಪತ್ತೆಯಾಗಿದೆ. ಈ ಸಂಬಂಧ ಕಾಳಿಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.