ಬೆಂಗಳೂರು : ಒಂದು ಕಡೆ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಕಾಂಗ್ರೆಸ್ ಪಾಳಯದಲ್ಲಿ ಕೇಳಿಬರುತ್ತದೆ. ನವೆಂಬರ್ ನಲ್ಲಿ ಕ್ರಾಂತಿ ಅಗಲಿದೆ ಎಂದು ಈಗಾಗಲೇ ಕೆಲವು ನಾಯಕರು ಹೇಳಿಕೆ ನೀಡಿದ್ದು ಇದರ ಮಧ್ಯ ನಾಯಕತ್ವ ಬದಲಾವಣೆ ಕುರಿತು ಕೂಡ ಭಾರಿ ಚರ್ಚೆ ಆಗುತ್ತಿದೆ.
ಇನ್ನು ಸಂಪುಟ ಪುನಾರಚನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸುಳಿವು ನೀಡಿದ್ದಾರೆ. ಈ ನಡುವೆ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ರಾಜರಾಜಕಾರಣಕ್ಕೆ ಬರುತ್ತಾರ? ಎನ್ನುವುದರ ಕುರಿತು ಗೃಹ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು ಕರ್ನಾಟಕ ರಾಜ್ಯ ರಾಜಕಾರಣಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗಮಿಸಿದರೆ ಸ್ವಾಗತಿಸುತ್ತೇನೆ ಎಂದು ತಿಳಿಸಿದರು.
ಈ ವಿಚಾರವಾಗಿ ಮಾತನಾಡಿದ ಅವರು ಖಂಡಿತವಾಗಿಯೂ ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರು ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಅದರಲ್ಲೂ ಮುಖ್ಯವಾಗಿ ಖರ್ಗೆಯವರು ಕರ್ನಾಟಕಕ್ಕೆ ಬರಲು ಮನಸ್ಸು ಮಾಡಿದರೆ ಬರಲಿ. ಅವರು ನಮ್ಮ ದೊಡ್ಡ ನಾಯಕರು ಅವರು ಕರ್ನಾಟಕಕ್ಕೆ ಬರಲು ಬಯಸಿದರೆ ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.