Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂ.21ಕ್ಕೆ ‘NEET’ ಮರುಪರೀಕ್ಷೆ ಹಿನ್ನಲೆ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ : ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ WHO: ಎಬೋಲಾ ಭೀತಿ ಹಿನ್ನೆಲೆಯಲ್ಲಿ ಭಾರತೀಯರಿಗೆ ಕೇಂದ್ರದಿಂದ ‘ಪ್ರವಾಸ ಸಲಹೆ’ ಬಿಡುಗಡೆ!

ALERT : ರಾತ್ರಿ ಪೂರ್ತಿ ಮಲಗಿದ್ರೂ ಬೆಳಗ್ಗೆ ಎದ್ದ ತಕ್ಷಣ ಸುಸ್ತು ಕಾಡ್ತಾ ಇದೆಯಾ? ಈ ಡೇಂಜರಸ್ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ(DA) ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike
KARNATAKA

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ(DA) ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ತುಟ್ಟಿಭತ್ಯೆ ದರಗಳನ್ನು ( Dearness Allowance -DA) ಪರಿಷ್ಕರಿಸಿ ಸರ್ಕಾರ ಅಧಿಕೃತ ಆದೇಶ ಮಾಡಿದೆ. ತುಟ್ಟಿಭತ್ಯೆ ದರವನ್ನು ಶೇ.12.25ರಿಂದ 14.25ರಷ್ಟು ಪರಿಷ್ಕರಿಸಿ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಿಡಿಸಿದ್ದು, 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 12.25 ರಿಂದ ಶೇಕಡ 14.25 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದೆ.

ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ,

(ಅ) 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,

(ಆ) 2024ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ,

(ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ.
3. ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 12.25 ರಿಂದ ಶೇಕಡ 14.25 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.

5. ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಕ.ನಾ.ಸೇ(ಪ.ವೇ) ನಿಯಮಗಳು, 2024ರ ನಿಯಮ 3ರಲ್ಲಿ ಸೂಚಿಸಿರುವ ಮತ್ತು ಸದರಿ ನಿಯಮದಡಿ ಹೊರಡಿಸಿರುವ ಆದೇಶಗಳಲ್ಲಿ ಸೂಚಿಸಿರುವ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನವನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.

6. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರುಗಳಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ.

7. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.

8. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು.

9. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿ ಭತ್ಯೆಯನ್ನು ಮುಂದಿನ ಆದೇಶದವರೆಗೆ ನಗದಾಗಿ ಪಾವತಿ ಮಾಡುವುದು.

10.ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.

11. ತುಟ್ಟಿ ಭತ್ಯೆ ಬಾಕಿ ಮೊತ್ತವನ್ನು, 2025ರ ಅಕ್ಟೋಬರ್ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ.

12. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

BREAKING: ರಾಜ್ಯದ ‘ಪೊಲೀಸ್ ಇಲಾಖೆ’ಯಲ್ಲಿ ಖಾಲಿ ಇರುವ ‘2032 ಹುದ್ದೆ’ಗಳ ಭರ್ತಿಗೆ ಸರ್ಕಾರ ಆದೇಶ | JOB ALERT

ಸಾಗರದ ‘ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಹಾಲಿ ಸಮಿತಿ ವಿರುದ್ಧ ‘ನ್ಯಾಯಾಂಗ ನಿಂದನೆ’ ಅರ್ಜಿ

Share. Facebook Twitter LinkedIn WhatsApp Email

Related Posts

ಜೂ.21ಕ್ಕೆ ‘NEET’ ಮರುಪರೀಕ್ಷೆ ಹಿನ್ನಲೆ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ : ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

2 Mins Read

ALERT : ರಾತ್ರಿ ಪೂರ್ತಿ ಮಲಗಿದ್ರೂ ಬೆಳಗ್ಗೆ ಎದ್ದ ತಕ್ಷಣ ಸುಸ್ತು ಕಾಡ್ತಾ ಇದೆಯಾ? ಈ ಡೇಂಜರಸ್ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ!

2 Mins Read

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

2 Mins Read
Recent News

ಜೂ.21ಕ್ಕೆ ‘NEET’ ಮರುಪರೀಕ್ಷೆ ಹಿನ್ನಲೆ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ : ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ WHO: ಎಬೋಲಾ ಭೀತಿ ಹಿನ್ನೆಲೆಯಲ್ಲಿ ಭಾರತೀಯರಿಗೆ ಕೇಂದ್ರದಿಂದ ‘ಪ್ರವಾಸ ಸಲಹೆ’ ಬಿಡುಗಡೆ!

ALERT : ರಾತ್ರಿ ಪೂರ್ತಿ ಮಲಗಿದ್ರೂ ಬೆಳಗ್ಗೆ ಎದ್ದ ತಕ್ಷಣ ಸುಸ್ತು ಕಾಡ್ತಾ ಇದೆಯಾ? ಈ ಡೇಂಜರಸ್ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ!

BREAKING : ಎಬೋಲಾ ಭೀತಿ: 3 ಆಫ್ರಿಕನ್ ದೇಶಗಳಿಗೆ ಪ್ರಯಾಣಿಸದಂತೆ ಭಾರತೀಯರಿಗೆ ಕೇಂದ್ರದ ಎಚ್ಚರಿಕೆ

State News
KARNATAKA

ಜೂ.21ಕ್ಕೆ ‘NEET’ ಮರುಪರೀಕ್ಷೆ ಹಿನ್ನಲೆ : ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ : ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

By ಸುರೇಶ್‌ KARNATAKA 2 Mins Read

ಬೆಂಗಳೂರು: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ ಯುಜಿ (NEET-UG) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ…

ALERT : ರಾತ್ರಿ ಪೂರ್ತಿ ಮಲಗಿದ್ರೂ ಬೆಳಗ್ಗೆ ಎದ್ದ ತಕ್ಷಣ ಸುಸ್ತು ಕಾಡ್ತಾ ಇದೆಯಾ? ಈ ಡೇಂಜರಸ್ ಲಕ್ಷಣಗಳನ್ನ ನಿರ್ಲಕ್ಷಿಸಬೇಡಿ!

BIG NEWS : ರಾಜ್ಯದ ಜನತೆಯ ಗಮನಕ್ಕೆ : `ಅಟಲ್ ಜೀ ಜನಸ್ನೇಹಿ ಕೇಂದ್ರ’ ಯೋಜನೆಯಡಿ ಸಿಗಲಿದೆ ಈ 44 ಸೇವೆಗಳು

ALERT : ಮನುಷ್ಯ ಎಷ್ಟು ಡಿಗ್ರಿ ತಾಪಮಾನ ತಡೆದುಕೊಳ್ಳಬಲ್ಲ ಗೊತ್ತಾ? ಇಲ್ಲಿದೆ ಶಾಕಿಂಗ್ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.