ಬೆಂಗಳೂರು : ಶಿಕ್ಷಕ, ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿರುವವರಿಗೆ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ, ಅನುದಾನಿತ ಶಾಲೆಗಳು ಹಾಗೂ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕರ ಕೊರತೆ ನೀಗಿಸಲು 18 ಸಾವಿರ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಇಲ್ಲವೇ ಡಿಸೆಂಬರ್ನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಿದ ನಂತರ ಸಿಇಟಿ ಮೂಲಕ ಶಿಕ್ಷಕರ ನೇಮಕಾತಿ ಮಾಡಲಾಗುವುದು, ಅನುದಾನಿತ ಶಾಲೆಗಳಿಗೆ 5000 ಶಿಕ್ಷಕರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಸೇರಿ ಒಟ್ಟು 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಿಸಲಾಗುತ್ತದೆ ಎಂದು ಹೇಳಿದ್ದಾರೆ.
ಪರಿಶಿಷ್ಟ ಜಾತಿ ಒಳಪಂಗಡಗಳಿಗೆ ಒಳ ಮೀಸಲಾತಿ ಅನುಸಾರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ, ಈ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು ಎಂದರು.