ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೇ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತವೆ. ಇದೀಗ ಈ ಒಂದು ಬೆದರಿಕೆ ಕರೆಗಳ ಕುರಿತಂತೆ ಬೆಂಗಳೂರಿನ ಸದಾಶಿವನಗರ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಇದೀಗ ಎಫ್ಐಆರ್ ದಾಖಲಿಸಿದ್ದಾರೆ.ಆರ್ ಎಸ್ ಎಸ್ ಕುರಿತ ಹೇಳಿಕೆ ಬೆನ್ನಲ್ಲೇ ಸಚಿವ ಪ್ರಿಯಾಂಕ ಖರ್ಗೆಗೆ ಬೆದರಿಕೆ ಸಂದೇಶ ಬಂದಿತ್ತು.ಎರಡು ದಿನಗಳ ಹಿಂದೆ ಕಿಡಿಗೇಡಿಗಳು ಪ್ರಿಯಾಂಕ ಖರ್ಗೆ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಸದ್ಯ ಸದಾಶಿವ ನಗರ ಠಾಣೆ ಪೋಲಿಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.