ಮಂಡ್ಯ: ಜಿಲ್ಲೆಯ ಮದ್ದೂರಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಒಂದೇ ಸೂರಿನಡಿಯಲ್ಲಿ ದ್ವಿತೀಯ ಪಿಯುಸಿಯವರೆಗೆ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮದ್ದೂರಲ್ಲಿ ಮೂರು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಿಸಲು ಸರ್ಕಾರ ಅನುಮತಿ ನೀಡಿ ಅಧಿಕೃತ ಆದೇಶ ಮಾಡಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಮದ್ದೂರು ಕ್ಷೇತ್ರ ಶಾಸಕ ಕೆ.ಎಂ ಉದಯ್ ಅವರು, ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಕೆಪಿಎಸ್ ಶಾಲೆಗಳನ್ನಾಗಿ ಉನ್ನತಿಕರಿಸುವಂತೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಗಿತ್ತು. ನಮ್ಮ ಮನವಿಗೆ ಪ್ರತಿಸ್ಪಂದಿಸಿರುವಂತ ಅವರು ಮದ್ದೂರು ತಾಲೂಕಿನ ಅಣ್ಣೂರು, ಮಲ್ಲನಕುಪ್ಪೆ ಹಾಗೂ ಕೆ.ಬೆಳ್ಳೂರು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಯನ್ನಾಗಿ ಉನ್ನತೀಕರಿಸಿ ಅಧಿಕೃತ ಆದೇಶ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಮದ್ದೂರು ತಾಲ್ಲೂಕಿನ ಮೂರು ಶಾಲೆಗಳನ್ನು ಕರ್ನಾಟಕ ಪಬ್ಲಿಕಾ ಶಾಲೆಗಳನ್ನಾಗಿ ಉನ್ನತೀಕರಿಸಿದ್ದಾರೆ. ಇದರಿಂದ ಈ ಶಾಲೆಗಳಲ್ಲಿ ಇನ್ಮುಂದೆ LKGಯಿಂದ ದ್ವಿತೀಯ ಪಿಯುಸಿವರೆಗೆ ಒಂದೆಡೆಯೇ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರೆಯುವಂತೆ ಆಗಲಿದೆ. ನಮ್ಮ ಮನವಿಗೆ ಸ್ಪಂದಿಸಿ ಮದ್ದೂರಿಗೆ ಮೂರು ಕೆಪಿಎಸ್ಸಿ ಶಾಲೆ ಮಂಜೂರು ಮಾಡಿದಂತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಧನ್ಯವಾದವನ್ನು ತಿಳಿಸಿದ್ದಾರೆ.
ಮದ್ದೂರು ತಾಲ್ಲೂಕಿನ ಈ ಮೂರು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಣ
- ಮದ್ದೂರಿನ ಅಣ್ಣೂರಿನ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಣ
- ಮದ್ದೂರಿನ ಕೆ.ಬೆಳ್ಳೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಣ
- ಮದ್ದೂರಿನ ಮಲ್ಲನಕುಪ್ಪೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗ ಒಳಗೊಂಡು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಣಗೊಳಿಸಿ ಸರ್ಕಾರ ಅಧಿಕೃತ ಆದೇಶ ಮಾಡಿದೆ.
ವರದಿ: ಗಿರೀಶ್ ರಾಜ್, ಮಂಡ್ಯ
ಸಾಗರದ ಜನತೆಗೆ ಗುಡ್ ನ್ಯೂಸ್: ಈ ಶಾಲೆಗಳನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಯಾಗಿ ಉನ್ನತೀಕರಿಸಿ ಸರ್ಕಾರ ಆದೇಶ
BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್