ಕಲಬುರಗಿ : ಆರ್ ಎಸ್ ಎಸ್ ಚಟುವಟಿಕೆಗೆ ನಿಷೇಧ ಹೇರುವಂತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಬೆನ್ನಲ್ಲಿ ಪ್ರಿಯಾಂಕ ಖರ್ಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ಇದನ್ನು ಖಂಡಿಸಿ ಕಲ್ಬುರ್ಗಿ ಜಿಲ್ಲೆಯ ಚಿತಾಪುರ ಪಟ್ಟಣ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ಹೌದು ಪುರ್ಯಾಕ್ ಖರ್ಗೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಪಟ್ಟಣ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಚಿತಾಪುರ ಬಂದ್ ಗೆ ಕರೆ ನೀಡಿದ್ದು, ಪಟ್ಟಣದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಇಂದು ಇಡೀ ಚಿತ್ತಾಪುರ ಪಟ್ಟಣ ಸಂಪೂರ್ಣವಾಗಿ ಸ್ತಬ್ಧವಾಗಿತ್ತು.