ಬೆಂಗಳೂರು: ರಾಜ್ಯದಲ್ಲಿನ 75 ವರ್ಷ ಮೇಲ್ಪಟ್ಟ AAY ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಅನ್ನ ಸುವಿಧಾ ಯೋಜನೆಯನ್ನು ವಿಸ್ತರಣೆ ಮಾಡುವುದಾಗಿ ಘೋಷಿಸಿದ್ದಾರೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅನ್ನ ಸುವಿಧಾ ಯೋಜನೆಯ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವು ಆತ್ಮಗೌರವದ ಬದುಕಿಗೆ ನೂತನ ಹೆಜ್ಜೆ ಇರಿಸಿದೆ. 75 ವರ್ಷ ಮೇಲ್ಪಟ್ಟ ಎಎವೈ ಹಾಗೂ ಬಿಪಿಎಲ್ ಪಡಿತರದಾರರಿಗೆ ಅನ್ನ ಸುವಿಧಾ ಯೋಜನೆ ವಿಸ್ತರಣೆ ಮಾಡಲಾಗುತ್ತಿದೆ. ಈಗ ನಿಮ್ಮ ಪಡಿತರ ನಿಮ್ಮ ಮನೆ ಬಾಗಿಲಿಗೇ ತಲುಪುತ್ತದೆ. ಇಂದೇ ನ್ಯಾಯಬೆಲೆ ಅಂಗಡಿಯಲ್ಲಿ ನೋಂದಾಯಿಸಿ, ಸರ್ಕಾರದ ಜನಹಿತದ ಪ್ರಯತ್ನದಲ್ಲಿ ಭಾಗಿಯಾಗಿರಿ ಎಂಬುದಾಗಿ ಕರೆ ನೀಡಿದ್ದಾರೆ.
ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.
ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನವನ್ನು ಉಲ್ಲೇಖಿಸಿದರು.
ಗೊತ್ತಿದ್ದೂ ಗೊತ್ತಿದ್ದೂ ಆಹಾರ ವೇಸ್ಟ್ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದರು.
ಅನ್ನ ವೇಸ್ಟ್ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ ಎಂದರು.
ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ
ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ಕಾಂಗ್ರೆಸ್ ಬದ್ದತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಪ್ರಧಾನಿ ಮನ ಮೋಹನ್ ಸಿಂಗ್. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ಕಾಂಗ್ರೆಸ್ಸಿಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ಕಾಂಗ್ರೆಸ್ ಬದ್ಧತೆ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದರು.
ರಾಜ್ಯದ ‘ಪಡಿತರ ಚೀಟಿದಾರ’ರಿಗೆ ‘ಸಿಎಂ ಸಿದ್ಧರಾಮಯ್ಯ’ ಮತ್ತೊಂದು ಗುಡ್ ನ್ಯೂಸ್
BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್