ಬೆಂಗಳೂರು: ರಾಜ್ಯದ ಸರ್ಕಾರಿ ಜಾಗಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕುವಂತ ಮಹತ್ವದ ತೀರ್ಮಾನವನ್ನು ಇಂದು ನಡೆದಂತ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತಡತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸರ್ಕಾರಿ ಜಾಗಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕುವಂತ ತೀರ್ಮಾನವನ್ನು ಕೈಗೊಂಡಿದೆ.
ರಾಜ್ಯದ ಸರ್ಕಾರಿ ಜಾಗಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಖಾಸಗಿ ಸಂಘ-ಸಂಸ್ಥೆಗಳಿಗೆ ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ.
ಆರ್ ಎಸ್ ಎಸ್ ಕಾರ್ಯಚಟುವಟಿಕೆಗಳಿಗೆ ಬ್ರೇಕ್
ರಾಜ್ಯದಲ್ಲಿ ಆರ್ ಎಸ್ ಎಸ್ ಕಾರ್ಯಚಟುವಟಿಕೆಗೆ ಬ್ರೇಕ್ ಹಾಕಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಡಲು ನಿರ್ಭಂದ ವಿಧಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಒಂದು ವೇಳೆ ಮಾಡಲು ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಆಸ್ತಿ, ಸಾಂಸ್ಥಿಕ ಆಸ್ತಿ ಸರಿಯಾಗಿ ನಿರ್ವಹಣೆ ಮಾಡಬೇಕು. ಯಾವುದೇ ರೀತಿ ಟ್ರಸ್ ಪಾಸ್ ಆಗೋಕೆ ಬಿಡುವಂತಿಲ್ಲ. ಅನುಮತಿ ಪಡೆದು ಕಾರ್ಯಕ್ರಮ ಮಾಡಲು ಅವಕಾಶ. ಅವಕಾಶ ಇಲ್ಲದೆ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
ಶೀಘ್ರವೇ ಮಂಡ್ಯದ ಮೈಶುಗರ್ ಶಾಲೆಯನ್ನು ಅಭಿವೃದ್ಧಿಗೆ 10 ಕೋಟಿ ಬಿಡುಗಡೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
BIG NEWS: ರಾಜ್ಯದ ‘ಸರ್ಕಾರಿ ಶಾಲಾ ಆವರಣ’ದಲ್ಲಿ ಖಾಸಗಿ ಕಾರ್ಯಕ್ರಮ ಬ್ಯಾನ್: 2013ರಲ್ಲೇ ಆದೇಶ, ಪತ್ರ ವೈರಲ್