ಬೆಂಗಳೂರು: ನಗರದಲ್ಲಿ ಹಾಡಹಗಲೇ ವಿದ್ಯಾರ್ಥಿನಿಯನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ.
ಬೆಂಗಳೂರಿನ ಶ್ರೀರಾಮಪುರ ರೈಲ್ವೆ ಟ್ರ್ಯಾಕ್ ಬಳಿಯಲ್ಲಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕತ್ತುಕೊಯ್ದು ಕೊಲೆ ಮಾಡಿರುವಂತ ದುಷ್ಕರ್ಮಿಗಳು ರೈಲ್ವೆ ಟ್ರ್ಯಾಕ್ ಬಳಿಯಲ್ಲಿ ವಿದ್ಯಾರ್ಥಿನಿಯ ಶವ ಎಸೆದು ಹೋಗಿದ್ದಾರೆ ಎನ್ನಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.