ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ.
ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡುವುದು, ರಾಜ್ಯ ಸರ್ಕಾರದ ಅಧಿಕಾರಿ/ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿಯನ್ನು ರೂ.17000 ಗಳಿಂದ ರೂ. 27000 ಸಾವಿರಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ.
ಆರೋಗ್ಯ ಸಂಜೀವಿನಿ ಯೋಜನೆಯಡಿಯಲ್ಲಿ ನೋಂದಾಯಿತವಾಗಿರುವ ಆಸ್ಪತ್ರೆಗಳು, ಚಿಕಿತ್ಸಾ ಸೌಲಭ್ಯಗಳು ಮತ್ತು ಇತರೆ ಉಪಯುಕ್ತ ಮಾಹಿತಿಯ ಕೈಪಿಡಿ