ಮೈಸೂರು : ಸರ್ಕಾರಿ ಸ್ಥಳಗಳಲ್ಲಿ ನಿರ್ಬಂಧ ವಿಧಿಸಿರುವುದು ಕೇವಲ ಆರ್ ಎಸ್ ಎಸ್ ಗೆ ಮಾತ್ರವಲ್ಲ.ಎಲ್ಲಾ ಸಂಘ ಸಂಸ್ಥೆಗಳಿಗೂ ಅನ್ವಯ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ಬಂಧ ಕೇವಲ ಆರ್ ಎಸ್ ಎಸ್ ಗೆ ಮಾತ್ರ ಅನ್ವಯ ಅಲ್ಲ,ಎಲ್ಲಾ ಸಂಘ ಸಂಸ್ಥೆಗಳಿಗೂ ಅನ್ವಯವಾಗಲಿದೆ. 2013ರಲ್ಲೇ ಬಿಜೆಪಿ ಸರ್ಕಾರವೇ ಆದೇಶ ಹೊರಡಿಸಿದೆ. ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಆದೇಶ ಹೊರಡಿಸಲಾಗಿದೆ.ಅವರೇ ಮಾಡಿ ಅವರೇ ವಿರೋಧ ಮಾಡಿದ್ರೆ ಹೆಂಗೆ ಎಂದು ಪ್ರಶ್ನಿಸಿದ್ದಾರೆ.
ಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ – ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ – ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಇಂದು ನನ್ನ… pic.twitter.com/WdX6nMfoFM
— Siddaramaiah (@siddaramaiah) October 16, 2025