ಬೆಂಗಳೂರು : ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸುತ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮೈಸೂರಿನಲ್ಲಿ ಆಯೋಜಿಸಿದ್ದ ವಿಭಾಗ ಮಟ್ಟದ ಯುವ ಸಮೃದ್ಧಿ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ನರೇಂದ್ರ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು. ಈ 11 ವರ್ಷಕ್ಕೆ ಒಟ್ಟು 22 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು ಎಂದರು.
ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸುತ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು.
ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ನರೇಂದ್ರ ಮೋದಿ ಅಲ್ಲ. ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಮಾತು ತಪ್ಪಿದರು.… pic.twitter.com/d6JHL4CEpw
— Siddaramaiah (@siddaramaiah) October 17, 2025
ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ ಸರ್ಕಾರ ಬೆಂಗಳೂರಿನಲ್ಲಿ ನಡೆಸಿದ ಉದ್ಯೋಗ ಮೇಳದಿಂದಾಗಿ 58,892 ಮಂದಿ ಉದ್ಯೋಗಾಕಾಂಕ್ಷಿಗಳು ಭಾಗಿಯಾಗಿ ಅನುಕೂಲ, ಅರಿವು ಪಡೆದುಕೊಂಡಿದ್ದಾರೆ. ಇವರಲ್ಲಿ 11,507 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 22,869 ಅಭ್ಯರ್ಥಿಗಳ ಹೆಸರನ್ನು ಅಂತಿಮ ಹಂತಕ್ಕೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.