ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಹರಿದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಾಲೆ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ 9 ವರ್ಷದ ಬಾಲಕಿ ಭುವನ ಮೇಲೆ ಬಿಎಂಟಿಸಿ ಚಕ್ರ ಹರಿದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಾಜಿನಗರ ಮೊದಲನೇ ಬ್ಲಾಕ್ನ ಸಿಗ್ನಲ್ ಬಳಿ ನಡೆದಿದೆ.
ರಾಜಾಜಿನಗರ ಮೊದಲನೇ ಬ್ಲಾಕ್ನಲ್ಲಿರುವ ಪಾಂಚ ಜನ್ಯ ವಿದ್ಯಾಪೀಠ ಶಾಲೆಯಲ್ಲಿ ಐದನೇ ತರಗತಿ ಓದುತ್ತಿದ್ದ 9 ವರ್ಷದ ಭುವನ ತನ್ನ ಇಬ್ಬರು ಸಹೋದರಿಯರ ಜೊತೆ ಸಿಗ್ನಲ್ ದಾಟುವ ವೇಳೆ ಬಿಎಂಟಿಸಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾಳೆ. ಭುವನ ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.