ಚಾಮರಾಜನಗರ : ಗ್ರಾಮಪಂಚಾಯಿತಿ ಕಚೇರಿ ಎದುರೇ ವಾಟರ್ ಮ್ಯಾನ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಂಬಳ ನೀಡಿಲ್ಲ ಎಂದು ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಾಮರಾಜನಗರ ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಗ್ರಾಮಪಂಚಾಯಿತಿ ಕಚೇರಿ ಮುಂದೆಯೇ ವಾಟರ್ ಮ್ಯಾನ್ ಚಿಕ್ಕಸು ನಾಯಕ (65) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊಂಗನೂರು ಗ್ರಾಮಪಂಚಾಯಿತಿನಲ್ಲಿ ಚಿಕ್ಕಸು ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಮುಂಜಾನೆ ಗ್ರಾಮಸ್ಥರು ಗ್ರಾ.ಪಂ.ಕಚೇರಿಗೆ ಬಂದಾಗ ಚಿಕ್ಕಸು ಗ್ರಾ.ಪಂ. ಬಾಗಿಲು ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಚಕ್ಕಸು, ಸಂಬಳಕ್ಕಾಗಿ ಎಷ್ಟೇ ಮನವಿ ಮಾಡಿಕೊಂಡಿದ್ದರೂ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ರೂಪಾ ಮತ್ತು ಪಿಡಿಓ ರಾಮೇಗೌಡ ಚಿಕ್ಕಸು ಅವರನ್ನು ಗದರಿಸಿ ಕಳುಹಿಸುತ್ತಿದ್ದರು. ಇದರಿಂದ ಬೇಸತ್ತ ವಾಟರ್ಮ್ಯಾನ್ ಚಿಕ್ಕಸು ಡೆತ್ ನೋಟ್ ಬರೆದಿಟ್ಟು, ಗ್ರಾಮ ಪಂಚಾಯಿತಿ ಕಚೇರಿ ಬಾಗಿಲಿನ ಮುಂದೆಯೇ ನೇಣು ಬಿಗಿಕೊಂಡು ಸಾವನ್ನಪ್ಪಿದ್ದಾರೆ. ಈ ಕುರಿತು ಚಾಮರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.