ಬೆಂಗಳೂರು: ವಿಮಾನದಲ್ಲಿ ಬಾಂಬ್ ಇದೆ ಎಂದು ಬರೆದು ವ್ಯಕ್ತಿಯೊಬ್ಬ ಹುಚ್ಚಾಟ ಮೆರೆದಿರುವ ಘಟನೆ ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ನಡೆದಿದೆ.
ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದ ಬಾತ್ ರೂಮ್ ನಲ್ಲಿ ಬಾಂಬ್ ಇದೆ ಎಂದು ವ್ಯಕ್ತಿಯೊಬ್ಬ ಹುಚ್ಚಾಟ ಮೆರೆದಿದ್ದಾನೆ. ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಇಂಡಿಗೋ 6E4814 ವಿಮಾನದಲ್ಲಿ 168 ಪ್ರಯಾಣಿಕರಿದ್ದರು. ವ್ಯಕ್ತಿಯ ಹುಚ್ಚಾಟದಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.
ಬಾಂಬ್ ಎಂಬ ಪದ ನೋಡಿ ಪ್ರಯಾಣಿಕರು ಆತಂಕಗೊಂಡಿದ್ದರು. ಕೂಡಲೇ ಪೈಲಟ್ ಬೆಂಗಳೂರಿಗೆ ವಿಮಾಣವನ್ನು ಡೈವರ್ಟ್ ಮಾಡಿದ್ದಾರೆ. ಮಧ್ಯರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡ್ ಮಾಡಲಾಗಿದೆ. ಬಳಿಕ ಬಾಂಬ್ ನಿಷ್ಕ್ರಿಯ ಸಿಬ್ಬಂದಿ, ಶ್ವಾನದಳ ಸಿಬ್ಬಂದಿ ವಿಮಾವನ್ನು ಪರಿಶೀಲಿಸಿದ್ದಾರೆ. ಪರಿಶೀಲನೆ ವೇಳೆ ಯಾವ ಸ್ಪೋಟಕ ವಸ್ತುಗಳೂ ಪತ್ತೆಯಾಗಿಲ್ಲ. ಪೊಲೀಸರು ಮಾಹಿತಿಯಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ.