ಬಾಗಲಕೋಟೆ : ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತು ಈಗಾಗಲೇ ಹಲವು ಚರ್ಚೆಗಳು ಆರಂಭವಾಗಿದ್ದು, ಇದರ ಬೆನ್ನಲ್ಲೇ ಅಬಕಾರಿ ಇಲಾಖೆ ಸಚಿವ ಆರ್.ಬಿ ತಿಮ್ಮಾಪುರ ಮುಂದಿನ ಮುಖ್ಯಮಂತ್ರಿ ಸಚಿವ ಸತೀಶ್ ಜಾರಕಿಹೊಳಿ ಆಗಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನೋಡಿದಿದ್ದಾರೆ.
ಹೌದು ಮುಧೋಳದಲ್ಲಿ ಜಡಗಣ್ಣ- ಬಾಲಣ್ಣ ಕಂಚಿನ ಮೂರ್ತಿ ಅನಾವರಣ ಹಾಗೂ ವಾಲ್ಮೀಕಿ ಜಯಂತಿ ಕಾರ್ಯಕ್ರಮ ವೇಳೆ ಮಾತನಾಡಿದ ಆರ್‌ಬಿ ತಿಮ್ಮಾಪೂರ, ಈ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದಿದ್ದಾರೆ. ಸ್ವಾಗತ ಭಾಷಣ ಮಾಡುತ್ತಾ ಆರ್‌ಬಿ ತಿಮ್ಮಾಪೂರ, ವೇದಿಕೆಯಲ್ಲಿರುವ ನನ್ನ ನಾಯಕ, ಮುಂದಿನ ಎಲ್ಲರ ನಿರೀಕ್ಷೆಯಲ್ಲಿರುವ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದಿದ್ದಾರೆ. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಸತೀಶ್ ಜಾರಕಿಹೊಳಿ ಯಾರದೋ ಕೃಪೆಯಿಂದ ಮುಖ್ಯಮಂತ್ರಿ ಆಗುವುದಲ್ಲ, ಅವರ ಸ್ವಂತ ಶಕ್ತಿಯಿಂದ ಮುಖ್ಯಮಂತ್ರಿ ಆಗುತ್ತಾರೆ. ಅಭಿವೃದ್ಧಿ ಕಾರ್ಯಗಳ ಮೂಲಕ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುತ್ತಾರೆ. ಸತೀಶ್ ಜಾರಕಿಹೊಳಿ ಒಂದಲ್ಲ ಒಂದು ದಿನ ಈ ನಾಡಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ಆರ್‌ಬಿ ತಿಮ್ಮಾಪೂರ ಹೇಳಿದ್ದಾರೆ.
ಒಂದು ಕಡೆ ಸರ್ಕಾರ ಎರಡೂವರೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅಧಿಕಾರ ಹಂಚಿಕೆ ಆಗಲಿದೆ ಎಂದು ಚರ್ಚೆ ನಡೆಯುತ್ತಿದ್ದರೆ, ಮತ್ತೊಂದು ಕಡೆ ಸಂಪುಟ ಪುನಾರಚನೆ ಆಗಲಿದೆ ಎಂದು ಹೇಳಲಾಗುತ್ತಿದೆ. ಸಂಪುಟಕ್ಕೆ ಸರ್ಜರಿಯಾದರೆ ಸುಮಾರು 15 ಹಾಲಿ ಸಚಿವರಿಗೆ ಕೊಕ್ ನೀಡುವ ಸಾಧ್ಯತೆಯಿದ್ದು 15 ಶಾಸಕರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಇದರ ಮಧ್ಯ ಸಚಿವ ತಿಮ್ಮಪುರ್ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ.