ಬೆಂಗಳೂರು: ನಗರದಲ್ಲಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಅಕ್ಟೋಬರ್.23ರವರೆಗೆ ಜಾತಿಗಣತಿ ಸಮೀಕ್ಷೆಗೆ ಸರ್ಕಾರ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿದರು. ಹಿಂದುಳಿದ ವರ್ಗಗಳ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ, ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸಮೀಕ್ಷೆಗೆ ಅಕ್ಟೋಬರ್.23ರವರೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕುವಂತ ನಿರ್ಧಾರವನ್ನು ಕೈಗೊಂಡರು.
ಅಕ್ಟೋಬರ್ 23ರಿಂದ 31ರವರೆಗೆ ದೀಪಾವಳಿ ಹಬ್ಬದ ಬಳಿಕ ಬೆಂಗಳೂರಲ್ಲಿ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ರಾಮಲಿಂಗಾ ರೆಡ್ಡಿ, ಭೈರತಿ ಸುರೇಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯಕ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
BIG Alert: ‘ಪಟಾಕಿ’ ಸಿಡಿಸುವಾಗ ತಪ್ಪದೇ ಈ ಸಲಹೆ, ಎಚ್ಚರಿಕೆ ಪಾಲಿಸಿ!