ಮಂಡ್ಯ: ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಬಳಿಯಲ್ಲಿ ಮೂರು KSRTC ಬಸ್ ಗಳ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ.
ಮೊದಲು ಎರಡು ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಆ ನಂತ್ರ ಡಿಕ್ಕಿಯಾಗಿ ನಿಂತಿದ್ದಂತ ಬಸ್ಸಿಗೆ ಮತ್ತೊಂದು ಬಸ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು ಮಳವಳ್ಳಿ, ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು. ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಗಿರೀಶ್ ರಾಜ್, ಮಂಡ್ಯ
ರಾಜ್ಯದ ‘ಗ್ರಾಮ ಪಂಚಾಯ್ತಿ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ‘ವೇತನ ಪಾವತಿ’ಗೆ ಸರ್ಕಾರ ಖಡಕ್ ಆದೇಶ
BIG Alert: ‘ಪಟಾಕಿ’ ಸಿಡಿಸುವಾಗ ತಪ್ಪದೇ ಈ ಸಲಹೆ, ಎಚ್ಚರಿಕೆ ಪಾಲಿಸಿ!