ಕಲಬುರ್ಗಿ : ರಾಜ್ಯದಲ್ಲಿ ಆರ್ ಎಸ್ ಎಸ್ ಪಥ ಸಂಚಲನದಲ್ಲಿ ಸರ್ಕಾರಿ ನೌಕರರು ಭಾಗಿಯಾಗಬಾರದು ಎಂದು ಇತ್ತೀಚಿಗೆ ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅದರ ಬೆನ್ನಲ್ಲೆ ಆರ್ ಎಸ್ ಎಸ್ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿತ್ತು. ಇದೀಗ ಕಲ್ಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ಸರ್ಕಾರಿ ವೈದ್ಯರು ಒಬ್ಬರು ಆರ್ ಎಸ್ ಎಸ್ ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ.
ಹೌದು ಪಿಡಿಒ ಬೆನ್ನಲ್ಲೇ, ಆರ್ ಎಸ್ ಎಸ್ ಪಥ ಸಂಚನದಲ್ಲಿ ಮತ್ತೊರ್ವ ಸರ್ಕಾರಿ ಅಧಿಕಾರಿ ಭಾಗಿಯಾಗಿದ್ದಾರೆ. ಗಣವೇಶ ಧರಿಸಿ ಸರ್ಕಾರಿ ವೈದ್ಯ ಪಥ ಸಂಚಲನ ಮಾಡಿದ್ದಾರೆ. ಸೇಡಂ ತಾಲೂಕಿನ ಆಡಳಿತ ವೈದ್ಯಾಧಿಕಾರಿ ನಾಗರಾಜ್ ಆರ್ ಎಸ್ ಎಸ್ ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ.
ಅಲ್ಲದೇ ಹಲವು ಕಾಂಗ್ರೆಸ್ ಕಾರ್ಯಕರ್ತರು ಸಹ ಭಾಗಿಯಾಗಿದ್ದು ಕಂಡು ಬಂದಿದೆ. ಇತ್ತೀಚಿಗೆ ಆರ್ ಎಸ್ ಎಸ್ ಪಥ ಸಂಚಲನದಲ್ಲಿ ಭಾಗಿಯಾಗಿದ್ದ ದೇವದುರ್ಗದ ವಿಡಿಯೋ ಅಧಿಕಾರಿ ಒಬ್ಬರನ್ನು ಸಸ್ಪೆಂಡ್ ಮಾಡಲಾಯಿತು. ಆದರೆ ಬೆನ್ನಲ್ಲೇ ಇದೀಗ ಸರ್ಕಾರಿ ವೈದ್ಯಾಧಿಕಾರಿ ಆರ್ ಎಸ್ ಎಸ್ ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ.