ಹಾವೇರಿ : ದೀಪಾವಳಿ ಹಬ್ಬದಂದೆ ಘೋರವಾದ ದುರಂತ ಒಂದು ನಡೆದಿದ್ದು, ಕೌಟುಂಬಿಕ ಕಲಹ ಹಾಗೂ ವರದಕ್ಷಣೆ ಕಿರುಕುಳ ಹಿನ್ನೆಲೆ ಮಗಳ ಜೊತೆಗೆ ವರದಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ವರದಹಳ್ಳಿ ಸಮೀಪ ಒಂದು ಘಟನೆ ನಡೆದಿದೆ.
ಹಾವೇರಿ ತಾಲೂಕಿನ ವರದಹಳ್ಳಿಯಲ್ಲಿ ಕಾವ್ಯ (12) ಮತ್ತು ಸವಿತಾ ನಾಗರಾಜ್ ಉಳ್ಳಾಗಡ್ಡಿ (38) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಕಾವ್ಯ ಮೃತ ದೇಹವನ್ನು ಪತ್ತೆ ಮಾಡಿದ್ದು, ಸವಿತಾ ಮೃತ ದೇಹಕ್ಕಾಗಿ ಶೋಧ ಮುಂದುವರಿಸಿದ್ದಾರೆ. ವರದ ನದಿ ದಡದಲ್ಲಿ ಸವಿತಾ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದ್ದು ಹಾವೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.