ಬಾಗಲಕೋಟೆ : ವಾಲ್ಮೀಕಿ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ವಿಚಾರವಾಗಿ ಇದೀಗ ಬಾಗಲಕೋಟೆ ಜಿಲ್ಲೆಯಲ್ಲಿ ಮತ್ತೇರಡು ದೂರು ದಾಖಲಾಗಿವೆ. ಬಾಗಲಕೋಟೆಯಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ಹಾಗು ಮುಧೋಳ ಟೌನ್ ಪೊಲೀಸ ಠಾಣೆಗೆ ವೀರ ಸಿಂಧೂರ ಲಕ್ಷ್ಮಣ ಯುವ ಸೇನೆಯಿಂದ ದೂರು ಸಲ್ಲಿಸಲಾಗಿದೆ.
ಬಾಗಲಕೋಟೆಯಲ್ಲಿ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾಧ್ಯಕ್ಷ ದ್ಯಾಮಣ್ಣ ನೇತೃತ್ವದಲ್ಲಿ ದೂರು ದಾಖಲಿಸಲಾಗಿದೆ. ರಮೇಶ್ ಕತ್ತಿ ವಿರುದ್ಧ ಜಾತಿನಿಂದನೆ ಆರೋಪದಡಿ ದೂರು ಸಲ್ಲಿಕೆ ಮಾಡಿದ್ದಾರೆ. ಹಾಗು ಮುಧೋಳದಲ್ಲಿ ವೀರ ಸಿಂಧೂರ ಲಕ್ಷ್ಮಣ ಯುವ ಸೇನೆಯಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಬಿಜೆಪಿ ನಾಯಕ ರಮೇಶ್ ಕತ್ತಿ ಬಂಧಿಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.