ದಕ್ಷಿಣಕನ್ನಡ : ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ನೂಕುನುಗ್ಗುಲು ಉಂಟಾಗಿ 11 ಜನರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ 11ಕ್ಕೂ ಹೆಚ್ಚು ಜನರು ನೂಕುನಗ್ಗಲು ನಿಂದಾಗಿ ಅಸ್ವಸ್ಥಗೊಂಡಿದ್ದಾರೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಅಶೋಕ ಜನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದರು. ಈ ವೇಳೆ ಸಿಎಂ ಕಾರ್ಯಕ್ರಮದಲ್ಲಿ ನೂಕು ನುಗ್ಗುಲು ಉಂಟಾಗಿದ್ದು 11ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಮಹಿಳೆಯರು, ಮಕ್ಕಳು ಸೇರಿದಂತೆ ಬಹಳಷ್ಟು ಜನರು ಅಸ್ವಸ್ಥರಾಗಿದ್ದಾರೆ. ಕುಡಿಯಲು ನೀರು ಸಿಗದೆ ಜನರು ಪರದಾಟ ನಡೆಸಿದ್ದಾರೆ.ಸಣ್ಣ ಮಕ್ಕಳನ್ನು ಜನರು ಕರೆದುಕೊಂಡು ಈ ಒಂದು ಕಾರ್ಯಕ್ರಮಕ್ಕೆ ಬಂದಿದ್ದರು.
ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಶಾಸಕ ಅಶೋಕ ರೈ ನೇತ್ರತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ನೂಕು ನುಗ್ಗಲು ಉಂಟಾಗಿ ಆಮ್ಲಜನಕದ ಕೊರತೆ ಉಂಟಾಗಿದೆ.ಈ ವೇಳೆ ಸುಮಾರು ಮಹಿಳೆಯರು ಮಕ್ಕಳು ಸೇರಿದಂತೆ 11ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.