ಚಿತ್ರದುರ್ಗ : ವಿದ್ಯಾರ್ಥಿಯ ಮೇಲೆ ಮುಖ್ಯ ಶಿಕ್ಷಕನೊಬ್ಬ ಹಲ್ಲೆ ನಡೆಸಿರುವ ಘಟನೆ ನಾಯಕನಹಳ್ಳಿಯಲ್ಲಿ ನಡೆದಿದೆ. ಸಂಸ್ಕೃತ ವೇದ ಅಧ್ಯಯನ ಶಾಲಾ ಮುಖ್ಯ ಶಿಕ್ಷಕ ಹಲ್ಲೆ ನಡೆಸಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಸೇರಿದ ವೇದ ಅಧ್ಯಯನ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ.
ಪೋಷಕರಿಗೆ ಕರೆ ಮಾಡಿದ್ದ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯ ಮೇಲೆ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ ಹಲ್ಲೆ ಮಾಡಿ ದೌರ್ಜನ್ಯ ಮೆರೆದಿದ್ದಾರೆ. ವಿದ್ಯಾರ್ಥಿಯ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾನೆ. ಕಾಲಲ್ಲಿ ಇವತ್ತು ವಿಕೃತಿ ಮೆರೆದಿದ್ದಾನೆ. ಶಿಕ್ಷಕ ವಿರೇಶ ಹಿರೇಮಠ್ ಕ್ರೌರ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪುಟ್ಟ ವಿದ್ಯಾರ್ಥಿ ಮೇಲೆ ಶಿಕ್ಷಕ ಕ್ರೌರ್ಯ ಮೆರೆದಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಕರ್ನಾಟಕ ಮೊಲದ ವಿದ್ಯಾರ್ಥಿಯ ಮೇಲೆ ಶಿಕ್ಷಕ ದೌರ್ಜನ್ಯ ಎಸಗಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಶಿಕ್ಷಕ ವೀರೇಶ್ ನಾಪತ್ತೆಯಾಗಿದ್ದಾನೆ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ವೀರೇಶ್ ವಿರುದ್ಧ FIR ದಾಖಲಾಗಿದೆ.