ಬೆಂಗಳೂರು: ನಿನ್ನೆಯಷ್ಟೇ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು.
ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದರು. ಅವರಿಗೆ ಹೂಗುಚ್ಚ, ಸಿಹಿ ನೀಡಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು. ಅಲ್ಲದೇ ಕೆಲ ಕಾಲ ಅವರೊಂದಿಗೆ ಸಾಗರ ಕ್ಷೇತ್ರದ ವಿವಿಧ ವಿಚಾರಗಳನ್ನು ಚರ್ಚಿಸಿದರು ಎಂಬುದಾಗಿ ತಿಳಿದು ಬಂದಿದೆ.
ಇದಲ್ಲದೇ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಅವರ ಬೆಂಗಳೂರಿನ ನಿವಾಸದಲ್ಲಿ ಭೇಟಿಯಾದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಹೂಗುಚ್ಚ ನೀಡಿ, ಸಿಹಿ ಹಂಚಿಕೆ ಮಾಡಿ ದೀಪಾವಳಿ ಹಬ್ಬದ ಶುಭಾಶಗಳನ್ನು ಕೋರಿದರು. ಇದೇ ಸಂದರ್ಭದಲ್ಲಿ ಸಾಗರ ಕ್ಷೇತ್ರದ ಕಾನೂನು ಸುವ್ಯವಸ್ಥೆ ಸೇರಿದಂತೆ ವಿವಿಧ ವಿಚಾರಗಳನ್ನು ಅವರೊಂದಿಗೆ ಚರ್ಚಿಸಿದರು. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಮನವಿಗೆ ಗೃಹ ಸಚಿವರು ಸಕಾರಾತ್ಮಕವಾಗಿಯೇ ಪ್ರತಿಸ್ಪಂದಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ನ.2ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನ ನಡದೇ ನಡೆಯುತ್ತೆ: BJP ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
SHOCKING: ಹೆಂಡತಿಯ ಕಿರುಕುಳ ತಾಳಲಾರದೇ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ