ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿ ವ್ಯಾಪಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಬುಧವಾರ ಹೇಳಿದ್ದಾರೆ.
ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಮೋದಿಯವರನ್ನು “ಮಹಾನ್ ವ್ಯಕ್ತಿ” ಮತ್ತು “ಉತ್ತಮ ಸ್ನೇಹಿತ” ಎಂದು ಬಣ್ಣಿಸಿದರು ಮತ್ತು ಭಾರತದ ಜನರಿಗೆ ತಮ್ಮ ಆತ್ಮೀಯ ಶುಭಾಶಯಗಳನ್ನು ತಿಳಿಸಿದರು
ಭಾರತದ ಜನತೆಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ. ನಾನು ಇಂದು ನಿಮ್ಮ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದೇನೆ. ನಾವು ಉತ್ತಮ ಸಂಭಾಷಣೆ ನಡೆಸಿದ್ದೇವೆ … ಅವರು ಒಬ್ಬ ಮಹಾನ್ ವ್ಯಕ್ತಿ, ಮತ್ತು ಅವರು ವರ್ಷಗಳಲ್ಲಿ ನನ್ನ ಉತ್ತಮ ಸ್ನೇಹಿತರಾಗಿದ್ದಾರೆ” ಎಂದು ಟ್ರಂಪ್ ಹೇಳಿದರು