ಕಲಬುರ್ಗಿ : ಬಿಜೆಪಿಯ ಮುಖಂಡೆ ದಿವ್ಯ ಹಾಗರಗಿ ಮನೆಯ ಮೇಲೆ ಇಂದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಲ್ಬುರ್ಗಿಯ ಹಳೆ ಜೇವರ್ಗಿ ರಸ್ತೆಯಲ್ಲಿರುವ ದಿವ್ಯ ಹಾಗರಗಿಯ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ದಿವ್ಯ ಹಾಗರಗಿ ಮನೆಯಲ್ಲಿ ಇಸ್ಪೀಟ್ ಆಡುತ್ತಿದ್ದರು ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದಾರೆ.
ಹೌದು ಪಿಎಸ್ಐ ನೇಮಕಾತಿ ಹಗರಣದ ಆರೋಪಿಯಾಗಿರುವ ದಿವ್ಯಾ ಹಾಗರಗಿ ಮನೆಯಲ್ಲಿ ಇಂದು ಇಸ್ಪೀಟ್ ಆಡುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಿವ್ಯ ಹಾಗರಗಿ ಮನೆಯ ಮೇಲೆ ದಾಳಿ ಮಾಡಿದ್ದಾರೆ. ದಾಳಿಯ ವೇಳೆ 6 ಜನ ಜೂಜು ಕೋರಕೋನ್ನು ಅರೆಸ್ಟ್ ಮಾಡಿದ್ದು ಅಲ್ಲದೆ 42,000 ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ.