ಮೈಸೂರು : ಮೈಸೂರು ರೈಲ್ವೆ ನಿಲ್ದಾಣದಲ್ಲಿ ಮಗು ಅಪಹರಣಕ್ಕೆ ಯತ್ನಿಸಿದ ವೃದ್ಧೆಯನ್ನು ರೈಲ್ವೆ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸಿರುವ ಘಟನೆ ನಡೆದಿದೆ.
ಮೈಸೂರು ರೈಲ್ವೆ ನಿಲ್ದಾಣದಲ್ಲಿ ತಾಯಿ ಜೊತೆಗೆ ಮಲಗಿದ್ದ ಮಗುವನ್ನು ವೃದ್ಧೆಯೊಬ್ಬರು ಅಪಹರಿಸಿದ್ದರು. ಕೂಡಲೇ ಪೋಷಕರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರೈಲ್ವೆ ಪೊಲೀಸರು ಕೂಡಲೇ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿ ವೃದ್ದೆ ಮಗು ಎತ್ತಿಕೊಂಡು ಹೋಗುತ್ತಿದ್ದ ದೃಶ್ಯ ಸೆರೆಯಾಗಿದೆ. ರೈಲ್ವೆ ನಿಲ್ದಾಣದಲ್ಲೇ ಹಾಸನ ಮೂಲದ ನಂದಿನಿ ಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.