ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ನಿನ್ನೆ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಸಂಕಲ್ಪ ಪೂರೈಸಿದರು. ನೆಕ್ಸ್ಟ್ ಸಿಎಂ ಆಗಲು ಸಂಕಲ್ಪ ತೊಟ್ಟಿದ್ದಾರೆ ಎಂದು ಮಠದ ಆಚಾರ್ಯ ಒಬ್ಬರು ಮಾಧ್ಯಮಗಳಿಗೆ ಹೇಳಿದ್ದಾರೆ. ಇದರ ನಡುವೆ ಎಂಎಲ್ಸಿ ಯತಿಂದ್ರ ಸಿದ್ದರಾಮಯ್ಯ ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ. ಹಾಗಾಗಿ ವೈಚಾರಿಕವಾಗಿ ಮತ್ತು ಪ್ರಗತಿಪರವಾದ ಸಿದ್ಧಾಂತ ಇಟ್ಟುಕೊಂಡವರಿಗೆ ನಾಯಕತ್ವ ವಹಿಸಿಕೊಳ್ಳಲು ಒಬ್ಬರು ಬೇಕು. ಸತೀಶ್ ಜಾರಕಿಹೊಳಿ ಅಂತಹ ನಾಯಕರು ಜವಾಬ್ದಾರಿ ವಹಿಸಿಕೊಳ್ಳುತ್ತಾರೆ ಎಂದು ಅಹಿಂದ ದಾಳ ಉರುಳಿಸಿದ್ದಾರೆ.
ಇದರ ಮಧ್ಯ ಇದೀಗ ನವೆಂಬರ್ ನಲ್ಲಿ ಬಹುದೊಡ್ಡ ಕ್ರಾಂತಿ ಅಗಲಿದೆ ಎಂದು ಕೆಲವು ನಾಯಕರು ಈಗಾಗಲೇ ಭವಿಷ್ಯ ನುಡಿದಿದ್ದರು. ಅದರಂತೆ ನವೆಂಬರ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ 15 ರಿಂದ 20 ರ ಒಳಗಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂದು ಹೇಳಲಾಗುತ್ತಿದೆ. ಹೌದು ನವೆಂಬರ್ 15 ರಿಂದ 20 ರ ನಡುವೆ ರಾಜ್ಯ ರಾಜಕಾರಣದಲ್ಲಿ ಭಾರಿ ಮಹತ್ವದ ಬೆಳವಣಿಗೆ ಆಗುವ ಸಾಧ್ಯತೆ ಇದೆ. ನವೆಂಬರ್ 19 ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಆಹ್ವಾನಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ.
ನವೆಂಬರ್ 19ರಂದು ರಾಜ್ಯಮಟ್ಟದ ಕಾರ್ಯಕ್ರಮ ಒಂದಕ್ಕೆ ರಾಹುಲ್ ಗಾಂಧಿಗೆ ಆಹ್ವಾನ ನೀಡಲಾಗಿದ್ದು ರಾಹುಲ್ ಗಾಂಧಿಗೆ ಆಹ್ವಾನ ಮಾಡುವ ಕುರಿತು ಈಗಾಗಲೇ ಮಾತುಕತೆ ನಡೆದಿದೆ. ಡಿಸಿಎಂ ಡಿಕೆ ಶಿವಕುಮಾರ್ ಹೆಚ್ಚು ಆಸಕ್ತಿ ವಹಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲು ಡಿಸಿಎಂ ಡಿಕೆ ಶಿವಕುಮಾರ್ ತಯಾರಿ ಮಾಡಿಕೊಂಡಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ಜೊತೆಗೆ ಸಂಪುಟ ಪುನಾರಚನೆ ಬಗ್ಗೆಯೂ ಕೂಡ ಚರ್ಚೆ ನಡೆಸುವ ಸಾಧ್ಯತೆ ಇದೆ.ನವೆಂಬರ್ 15 ರಿಂದ 20ರ ಒಳಗಾಗಿ ಸಚಿವ ಸಂಪುಟ ಪುನಃ ರಚನೆಗೆ ಪ್ಲಾನ್ ಮಾಡಿಕೊಳ್ಳಲಾಗಿದೆ.
ಈ ವೇಳೆ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡಿ ಮುಗಿಸುವ ಇರಾದೆ ಹೊಂದಿದ್ದಾರೆ. ಇದೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ನವೆಂಬರ್ ಅಂತ್ಯಕ್ಕೆ ತಮ್ಮ ಲೆಕ್ಕಾಚಾರದಲ್ಲಿ ಕಡುಬು ಹಾಕಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.ಇದಕ್ಕಿಂತ ಮುಂಚಿತವಾಗಿಯೇ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆ ಸೂತ್ರ ಹೆಣೆದಿದ್ದಾರೆ. ಇದಕ್ಕೆ ಪೂರಕವಾಗಿ ಕರ್ನಾಟಕಕ್ಕೆ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಸೂತ್ರದೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕಾಯುತ್ತಿದ್ದಾರೆ. ರಾಹುಲ್ ಗಾಂಧಿ ರಾಜ್ಯ ಪ್ರವಾಸದ ವೇಳೆ ಕೆಲವು ಮಹತ್ವದ ಬೆಳವಣಿಗೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ.