ರಾಯಚೂರು : ಆರ್ ಎಸ್ ಎಸ್ ಪ್ರಮುಖರು, ಹಾಗು ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಆರೋಪಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಅಮೀರ್ ಹುಸೇನ್ ವಿರುದ್ಧ ಇದೀಗ ಎಫ್ ಐ ಆರ್ ದಾಖಲಾಗಿದೆ. Faisal Kst ಎಂಬ ಫೇಸ್ಬುಕ್ ಖಾತೆಯಿಂದ ಅಮೀರ್ ಹುಸೇನ್ ಆರ್ ಎಸ್ ಎಸ್ ಪ್ರಮುಖರು ಹಾಗೂ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದ. ಹನುಮಂತ ಎಂಬುವವರು ನೀಡಿದ ದೂರಿನ ಮೇರೆಗೆ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.