ಬೆಂಗಳೂರು: ವಿಧ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಬೇಕು ಶಿಕ್ಷಣದೊಂದಿಗೆ ಕ್ರೀಡೆಯೂ ಸಹ ವಿಧ್ಯಾರ್ಥಿಗಳಿಗೆ ಅತ್ಯಂತ ಪ್ರಮುಖವಾಗಿದೆ. ಹಾಗಾಗಿ ಕ್ರೀಡೆಗೆ ಹೆಚ್ಚಿನ ಒತ್ತು ನೀಡಿ ಎಂದು ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಕೆ. ಗೋಪಾಲಯ್ಯ ವಿಧ್ಯಾರ್ಥಿಗಳಿಗೆ ಸಲಹೆ ನೀಡಿದರು.
ಮಹಾಲಕ್ಷ್ಮೀಪುರಂ ಬಿಜಿಎಸ್ ಕಾಲೇಜು ಆಟದ ಮೈದಾನದಲ್ಲಿ ಇಂದು ಆಯೋಜಿಸಿದ್ದ ಬಿಜಿಎಸ್ ಪಿಯು ಕಾಲೇಜು ವಿಧ್ಯಾರ್ಥಿಗಳಿಂದ ಕ್ರೀಡೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಬಿಜಿಎಸ್ ಸಂಸ್ಥೆಯಿಂದ ಕ್ರೀಡಾಪಟುಗಳು ಉತ್ತಮ ರೀತಿ ತರಬೇತಿ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಬೇಕು ಎಂದು ತಿಳಿಸಿದರು.
ಬಿಜಿಎಸ್ ಸಂಸ್ಥೆಯು ಸಂಸ್ಕಾರ, ಸಂಸ್ಕೃತಿ, ಶಿಕ್ಷಣ, ಅನ್ನದಾಸೋಹ ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗವನ್ನು ಸೃಷ್ಟಿಸಿದೆ ಹಾಗೂ ರಾಜ್ಯದಲ್ಲಿ 1.6 ಲಕ್ಷಕ್ಕೂ ಹೆಚ್ಚಿನ ವಿಧ್ಯಾರ್ಥಿಗಳಿಗೆ ಶಿಕ್ಷಣವನ್ನು ಕೊಡುತ್ತಿರುವ ಶಿಕ್ಷಣ ಸಂಸ್ಥೆಯನ್ನು ನಿರ್ಮಿಸಿರುವ ಪರಮಪೂಜ್ಯ ಬಾಲಗಂಗಾಧರನಾಥ ಸ್ವಾಮೀಜಿ ಅವರನ್ನು ಕ್ಷಣ ಕ್ಷಣಕ್ಕೂ ಪೂಜಿಸಬೇಕು. ಈ ಸಂಸ್ಥೆಯಲ್ಲಿ ವಿಧ್ಯಾಭ್ಯಾಸ ಪಡೆಯುತ್ತಿರುವ ವಿಧ್ಯಾರ್ಥಿಗಳು ಯುಪಿಎಸ್ಸಿ ವರೆಗೂ ಇಲ್ಲಿ ಶಿಕ್ಷಣ ಪಡೆಯುವ ವ್ಯವಸ್ಥೆಯನ್ನು ನಿರ್ಮಲಾನಂದ ಮಹಾ ಸ್ವಾಮೀಜಿಯವರು ಕಲ್ಪಿಸಿದ್ದಾರೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು, ದಿವ್ಯಸಾನಿಧ್ಯ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿ, ಡಿಸಿಪಿ ರಾಮೇಗೌಡ, ಎಸಿಪಿ ಪವನ್, ಅಂತರಾಷ್ಟ್ರೀಯ ಕ್ರೀಡಾಪಟು ಅಯ್ಯಪ್ಪ, ಪ್ರಾಂಶುಪಾಲ ಡಾ. ರವಿಕುಮಾರ್, ಚರಣ್ ಹಾಗೂ ಇತರರು ಹಾಜರಿದ್ದರು.